ನವೆಂಬರ್ ೧ ರಂದು ಕಾಲೇಜಿನ ಆವರಣದಲ್ಲಿ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೌಂದರ್ಯ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಯುತ ವರುಣ್ ಕುಮಾರ್ ಅವರು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಗೌರವಿಸುವ ನಿಟ್ಟಿನಲ್ಲಿ ಕನ್ನಡ ನಾಡಿನ ಧ್ವಜಾರೋಹಣವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಾಡಗೀತೆ ಹಾಗೂ ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ಗೌರವಪೂರ್ವಕವಾಗಿ ನಾಡು ನುಡಿಗೆ ನಮನ ಸಲ್ಲಿಸಲಾಯಿತು.
ಕನ್ನಡ ಭಾಷೆ ಮತ್ತು ಕರ್ನಾಟಕದ ಗರಿಮೆ ಕುರಿತು ಹಿತನುಡಿಗಳನ್ನುನೆರೆದಿದ್ದ ಗಣ್ಯರು ಮಕ್ಕಳಿಗೆ ತಿಳಿಸಿದರು. . ಎನ್. ಸಿ. ಸಿ. ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳ ಪಥ ಸಂಚಲನವು ಈ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದಿತು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ಕನ್ನಡ ಸಂಸ್ಕೃತಿಯನ್ನು ಮನಮುಟ್ಟುವಂತೆ ಪ್ರದರ್ಶಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಹಾಬಲೇಶ್ವರ ತುಂಗ. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಿನ್ನಮ್ಮ ಕಾವೇರಪ್ಪ, ಸಿಬಿಎಸ್ಇ ಶಾಲೆಯ ಪ್ರಾಂಶುಪಾಲರಾದ ಸುಮಾ ರಾವ್, ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀಮತಿ ಕೃಪಾ ಆರ್ ದೇವ್ ಉಪಸ್ಥಿತರಿದ್ದರು.